ಕುಂದಾಪುರ: ಕರ್ನಾಟಕ ರಾಜ್ಯ (ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಶುಭಾರಂಭ

ಕುಂದಾಪುರ: ಸಹನಾ ಅಕ್ವಾಟಿಕ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಂಕದಕಟ್ಟೆ,ಕೋಟೇಶ್ವರ ಮತ್ತು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಅಂತರಾಷ್ಟ್ರೀಯ ಚೆಸ್ ಫೆಡರೇಶನ್ ನ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ (ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಏಪ್ರಿಲ್ 21 ಶುಕ್ರವಾರದಂದು ಕೋಟೇಶ್ವರದ ಸಹನಾ ಆರ್ಕಿಡ್ ಹೋಟೆಲ್‌ ನಲ್ಲಿ ಆರಂಭಗೊಂಡಿತು. ಸರಳವಾಗಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ […]

ಪ್ರಥಮ ವರ್ಷದಲ್ಲೇ 100% ಫಲಿತಾಂಶ ದಾಖಲಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು

ಕುಂದಾಪುರ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು 100% ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದಿದ್ದಾಳೆ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. […]

ದ್ವಿತೀಯ ಪಿಯುಸಿ ಫಲಿತಾಂಶ: ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರಾಜ್ಯ ಮಟ್ಟದ ರ‍್ಯಾಂಕ್

ಕುಂದಾಪುರ: ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ರ‍್ಯಾಂಕ್‌ಗಳನ್ನು ಪಡೆಯುವುದರೊಂದಿಗೆ ಅಭೂತ ಪೂರ್ವ ಸಾಧನೆ ಮೆರೆದ ಕುಂದಾಪುರದ ಏಕೈಕ ಕಾಲೇಜ್ ಆಗಿ ಹೊರಹೊಮ್ಮಿದೆ. ವಿಜ್ಞಾನ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ನೇಹಾ ಜೆ. ರಾವ್ 594 ಅಂಕಗಳೊಂದಿಗೆ ತೃತೀಯ ರ‍್ಯಾಂಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್, ಸೃಜನ್ ಭಟ್. ಕೆ 591 ಅಂಕಗಳೊಂದಿಗೆ 6ನೇ ರ‍್ಯಾಂಕ್, ಪ್ರಜ್ಞಾ , ನಿತೇಶ್, ಪ್ರಣಮ್ಯ ಜಿ.ಎಚ್ 589 ಅಂಕಗಳೊಂದಿಗೆ 8ನೇ […]

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ಪುನರಾರಂಭ

ಕುಂದಾಪುರ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ ಅಥವಾ ಹುಲಿಕಲ್‌ ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಪುನರಾರಂಭಗೊಂಡಿದೆ. ಘಾಟಿ ರಸ್ತೆಯ ಕಾಂಕ್ರಿಟೀಕರಣ, ರಕ್ಷಣಾ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ. 5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಸಹ್ ಹೊರಡಿಸಿದ್ದರು. ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ್ದರಿಂದ ನಿಷೇಧವನ್ನು 10 ದಿನಗಳ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಕಾಮಗಾರಿ ಬಹುತೇಕ ಪೂರಾಣಗೊಂಡ ಹಿನ್ನೆಲೆಯಲ್ಲಿ […]

ಕುಡಿಯುವ ನೀರಿನ ಪೂರೈಕೆಗೆ ಪರ್ಯಾಯ ಮೂಲಗಳನ್ನು ಶೋಧಿಸಲು ಜಿಲ್ಲಾಧಿಕಾರಿ ಸೂಚನೆ

ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, […]