ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ ವಿಸ್ತರಣೆ
ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ ಮೆಂಟ್ ಕಾಮಗಾರಿಯ ನಿರೀಕ್ಷಿತ ಪ್ರಗತಿಯಲ್ಲಿ ವ್ಯತ್ಯಯವಾಗಿರುವುದರಿಂದ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಇದ್ದ ನಿಷೇಧವನ್ನು 10 ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಹೆದ್ದಾರಿ ಕಾಮಗಾರಿಗಾಗಿ ಎಪ್ರಿಲ್ 05 ರ ವರೆಗೆ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕ್ಯೂರಿಂಗ್ ಗೆ ಇನ್ನೂ ಕೆಲವು ದಿನಗಳ ಕಾಲಾವಕಾಶ ಅಗತ್ಯವಾಗಿರುವುದರಿಂದ ವಾಹನ ಸಂಚಾರದ ನಿಷೇಧವನ್ನು […]
ಕುಂದಾಪುರ: ಏಪ್ರಿಲ್ 30 ರೊಳಗೆ ಆಸ್ತಿ ತೆರಿಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ
ಕುಂದಾಪುರ: ಪುರಸಭಾ ವ್ಯಾಪ್ತಿಯ ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲೀಕರು, 2023-24 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಜೂನ್ 30ರ ವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ.2 ರ ದಂಡವನ್ನು ವಿಧಿಸಲಾಗುವುದು ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕುಂದಾಪುರ: ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ
ಕುಂದಾಪುರ: ಸ್ವಪ್ರಯತ್ನಕ್ಕೆ ದೇವರ ಅನುಗ್ರಹವಿರುತ್ತದೆ. ನಮ್ಮ ಪ್ರಯತ್ನಕ್ಕೆ ದೇವರ ಅನುಗ್ರಹ ಸೇರಿದಾಗ ಮಾತ್ರವೇ ಕಾರ್ಯ ಸಫಲವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಅವರು ಮಂಗಳವಾರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದಾನಿಗಳಾದ ಹೆಗ್ಗುಂಜೆ ಬಡಾಮನೆ ವಿಶ್ವನಾಥ ಹೆಗ್ಡೆ, ಹೆಗ್ಗುಂಜೆ ಚಾವಡಿಮನೆ ರುದ್ರಮ್ಮ ಹೆಗ್ಗಡ್ತಿ, ಅಮರನಾಥ ಶೆಟ್ಟಿ ಮತ್ತು ಕುಟುಂಬಸ್ಥರು ಸೇವಾ ರೂಪದಲ್ಲಿ ನೀಡಿದ ನೂತನ ರಜತ ರಥ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು. ನಾವು ನೀಡಿದ್ದು, ಮಾಡಿದ್ದು ಎನ್ನುವುದಕ್ಕಿಂತ ದೇವರೇ ಮಾಡಿಸಿದ್ದು ಎನ್ನುವುದು ಅರ್ಥಪೂರ್ಣ. […]
ಕುಂದಾಪುರ: ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ; 2 ಟಿಪ್ಪರ್ ವಶ
ಕುಂದಾಪುರ: ತಾಲೂಕಿನ ಶಂಕರನಾರಾಯಣ ವ್ಯಾಪ್ತಿಯ ಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ […]
ಕುಂದಾಪುರ: ಕುಲಾಲ ಸಮಾಜ ಸಂಘದ ಕಟ್ಟಡ ನವೀಕರಣಕ್ಕೆ ಧನಸಹಾಯ
ಕುಂದಾಪುರ: ಕುಲಾಲ ಕ್ರೀಡೋತ್ಸವ- 2022ರಲ್ಲಿ ಉಳಿತಾಯವಾದ ಮೊತ್ತ 80400 ರೂ ಗಳನ್ನು ಕುಂದಾಪುರದ ಕುಲಾಲ ಸಮಾಜ ಸುಧಾರಕರ ಸಂಘದ ಕಟ್ಟಡ ನವೀಕರಣಕ್ಕೆ ಧನ ಸಹಾಯ ರೂಪದಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಘವೇಂದ್ರ ಕುಲಾಲ ಹೆಮ್ಮಾಡಿ, ವಿಠ್ಠಲ ಕುಲಾಲ ಹೆಸ್ಕುತ್ತುರು, ಹರೀಶ ಕುಲಾಲ ಕೆದೂರು, ಮಂಜುನಾಥ ಕುಲಾಲ ನೆಲ್ಲಿಕಟ್ಟೆ, ಹರೀಶ ಕುಲಾಲ ಹೊಂಬಾಡಿ, ಶಂಕರ ಕುಲಾಲ ಮೊಳಹಳ್ಳಿ ಉಪಸ್ಥಿತರಿದ್ದರು.