ಕುಂದಾಪುರ: ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮಾವೇಶ
ಕುಂದಾಪುರ: ದೇಶದ ಅಗ್ರಗಣ್ಯ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮವೇಶವು ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಬಂಧಕ ಶ್ರೀಜಿತ್ ಮಾತನಾಡಿ ತುಂಬ ಸಮಯದ ಬಳಿಕ ಗ್ರಾಹರಕ ಜೊತೆ ಸಂವಾದ ಮಾಡುವ ಯೋಗ ಬಂದಿದೆ. ಜಾಗತಿಕ ಸಾಂಕ್ರಮಿಕ ಸಂದರ್ಭದಲ್ಲಿ ತೊಂದರೆಯಾದರೂ ಬ್ಯಾಂಕ್ ತನ್ನ ಗ್ರಾಹಕರನ್ನು ಆಧರಿಸಿದೆ. ಡಿಸೆಂಬರ್ ಅಂತ್ಯಕ್ಕೆ ಬ್ಯಾಂಕ್ 20 […]
ಕುಂದಾಪುರ: ಡಿ. 22 ರಂದು ವಿದ್ಯುತ್ ವ್ಯತ್ಯಯ
ಕುಂದಾಪುರ: 110/11 ಕೆ.ವಿ ಹೊಸಂಗಡಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 22 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಜನ್ಸಾಲೆ ಮಾರ್ಗಗಳಲ್ಲಿ, ಉಳ್ಳೂರು-74, ಯಡಮೊಗೆ, ಕಮಲಶಿಲೆ, ಮತ್ತು ಆಜ್ರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
2 ಪ್ರತ್ಯೇಕ ದಾಳಿಯಲ್ಲಿ ನಾಲ್ಕು ಟಿಪ್ಪರ್; 20 ಮೆಟ್ರಿಕ್ ಟನ್ ಅಕ್ರಮ ಮರಳು ವಶ: ಗಣಿ ಇಲಾಖಾಧಿಕಾರಿಗಳಿಂದ ಕ್ಷಿಪ್ರ ಕಾರ್ಯಾಚರಣೆ
ಕುಂದಾಪುರ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ (ಡಿ.19) ಮದ್ಯಾಹ್ನ 12.30ಕ್ಕೆ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಪರಿಸರದಲ್ಲಿ ಕಾರ್ಯಚಾರಣೆ ನಡೆಸಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ […]
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ: ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೇರಿ ವತಿಯಿಂದ ಡಿ. 15 ರಂದು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರ ಸಾಧನೆ
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಕೆ. ಇ. ಎಲ್. ಎಸ್ ಪದವಿ ಪೂರ್ವ ಕಾಲೇಜು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ.14 ರಂದು ಜರುಗಿದ ರಾಜ್ಯ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ […]