ಕುಂಜಾಲು ದನದ ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ: ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗೆ ಶೋಧ ಕಾರ್ಯ ಮುಂದುವರಿದಿದೆ.ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಮಾಹಿತಿ ನೀಡಿದರು. ರಾಮ(49) ಕುಂಜಾಲು, ಪ್ರಸಾದ್(21) ಕುಂಜಾಲು, ನವೀನ್(35) ಮಟಪಾಡಿ, ಕೇಶವ ನಾಯ್ಕ್(50) ಸಂದೇಶ(35) ರಾಜೇಶ್ (28) ಕುಂಜಾಲು ಬಂಧಿತ ಆರೋಪಿಗಳು. […]