ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕುಪ್ಮಾ ಸಮಿತಿ ರಚನೆ: ಡಾ. ಮೋಹನ್ ಆಳ್ವ

ಮಂಗಳೂರು: ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ)ವು ಜು. 20ರಿಂದ ಸೆಪ್ಟೆಂಬರ್ 12ರವರೆಗೆ ಜಿಲ್ಲಾವಾರು ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಸದಸ್ಯತ್ವ ಅಭಿಯಾನ ನಡೆಸಲಿದೆ. ಅಲ್ಲದೆ ರಾಜ್ಯವ್ಯಾಪಿ ಕುಪ್ಮಾ ಜಿಲ್ಲಾ ಸಮಿತಿ ಗಳನ್ನು ರಚಿಸುವ ಮೂಲಕ ಕುಪ್ಮಾ ಸಂಘಟನೆಯನ್ನು ಬಲಪಡಿಸಲಾಗುವುದು ಎಂದು ಕುಪ್ಮಾ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 3500ಕ್ಕೂ ಅಧಿಕ ಅನುದಾನ ರಹಿತ […]