ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೂರ್ಮಾ ರಾವ್ ಅವರಿಗೆ ಬೀಳ್ಕೊಡುಗೆ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೂರ್ಮಾರಾವ್ ಅವರ ತಾಳ್ಮೆ, ಕರ್ತವ್ಯ ನಿಷ್ಠೆ, ನಾಯಕತ್ವ ಗುಣವನ್ನು ಶ್ಲಾಘಿಸಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಪೂರ್ಣಿಮಾ, ಸಹಾಯಕ ನಿರ್ದೇಶಕಿ ಕನ್ನಡ ಸಂಸ್ಕೃತಿ ಇಲಾಖೆ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ನೇಮಕ
ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐ.ಎ.ಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಳ್ಳಾಲ ತಾಲೂಕಿನ ಹಾವೂರು ಗ್ರಾಮದ ವಿದ್ಯಾಕುಮಾರಿ 2014 ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ಅವರನ್ನು ನೇಮಿಸಲಾಗಿದೆ. ಕೂರ್ಮಾ ರಾವ್ ಎಂ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.
ಕುಡಿಯುವ ನೀರಿನ ಪೂರೈಕೆಗೆ ಪರ್ಯಾಯ ಮೂಲಗಳನ್ನು ಶೋಧಿಸಲು ಜಿಲ್ಲಾಧಿಕಾರಿ ಸೂಚನೆ
ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, […]
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಾ ಪರಿನಿರ್ವಾಣ ದಿನ ಆಚರಣೆ
ಉಡುಪಿ: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮಗೆ ಮಂಗಳವಾರ ಮಾಲಾರ್ಪಣೆ ಮಾಡಲಾಯಿತು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಇಲಾಖೆಗಳ […]
ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ, ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ […]