ಸರ್ಕಾರಿ ಕಚೇರಿಯ ಹೊರಗುತ್ತಿಗೆ ನೌಕರರ ಕುಂದುಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಸೇರಿದಂತೆ ಮತ್ತಿತರ ನೌಕರರ ಕುಂದು ಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿ ವರ್ಗದವರ ವೇತನ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೇ ಮಾಡಿಕೊಟ್ಟು ಕಚೇರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದರೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು […]

ಆಶ್ರಮದಲ್ಲಿ ಬೆಳೆದ ಹೆಣ್ಣಿಗೆ ಆಸರೆಯಾದ ಜಿಲ್ಲಾಡಳಿತ: ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ವಿಧಿ ಪೂರೈಸಿದ ಶಾಸಕ

ಉಡುಪಿ: ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಗಳು ಜನಪರವಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯಗಳನ್ನು ಕೈಗೊಂಡಾಗ ಜನರ ಮೆಚ್ಚುಗೆಗೆ ಸಹಜವಾಗಿಯೇ ಪಾತ್ರರಾಗುತ್ತಾರೆ. ಜಿಲ್ಲೆಯ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತವು ಇಂತಹದ್ದೇ ಒಂದು ಕಾರ್ಯವನ್ನು ಕೈಗೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ಬೆಳೆದ ಅನಾಥ ಹುಡುಗಿ ಜಯಶ್ರೀ (ವಿಜಯಶ್ರೀ)ಎಂಬವರನ್ನು ಮಲ್ಲೇಶ ಡಿ.ಎಲ್. ಎಂಬವರೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿದ್ದು, ಅನಾಥ ಹೆಣ್ಣುಮಗಳಿಗೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಆಸರೆಯಾಗಿದ್ದಾರೆ. ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ […]

ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ: ಜಿಲ್ಲಾಧಿಕಾರಿಗೆ ದೂರು ನೀಡಿದ ಉದ್ಯೋಗಿಗಳು

ಪಡುಬಿದ್ರಿ: ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ನ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಕೆಲಸದ ವಾತಾವರಣ ಹದಗೆಟ್ಟಿದ್ದು, ಬೋಟಿಂಗ್‌ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಓರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ […]

ಹಿರಿಯರ ಅನುಭವಪೂರಿತ ಮಾರ್ಗದರ್ಶನದಿಂದ ಜಿಲ್ಲೆಯ ಅಭಿವೃದ್ದಿಯ ಸಂಕಲ್ಪ: ಶಾಸಕ ರಘುಪತಿ ಭಟ್

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರೀಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಜಿಲ್ಲೆಯ ಹಿರಿಯ ನಾಗರೀಕರು ತಮ್ಮ ಸಲಹೆ, ಅನುಭವಪೂರಿತ ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ […]

ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಂತರಾಷ್ಟ್ರೀಯ ಭೂಪಟದಲ್ಲಿಡಲು ಬ್ಲಾಗರ್ಸ್ ಮೀಟ್ ಆಯೋಜಿಸಿದ ಜಿಲ್ಲಾಡಳಿತ

ಉಡುಪಿ: ಜಿಲ್ಲೆಯು ಪ್ರವಾಸಿ ತಾಣಗಳಿಗೆ ಪ್ರಸಿದ್ದಿ ಹೊಂದಿದ್ದು, ಇಲ್ಲಿನ ಬೀಚ್ ಮತ್ತು ದೇವಾಲಯಗಳಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇಲ್ಲಿನ ಎಲ್ಲಾ ಪ್ರವಾಸಿ ತಾಣಗಳ ಬಗ್ಗೆ ಜನರಿಗೆ ತಿಳಿಸಲು ಈ ಬಾರಿಯ ಪ್ರವಾಸೋದ್ಯಮ ದಿನಾಚಾರಣೆ ಸಂದರ್ಭದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಬ್ಲಾಗರ್ಸ್ ಮೀಟ್ ಆಯೋಜಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ನೀಡುವಲ್ಲಿ ಸಾಮಾಜಿಕ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಇದೇ […]