ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ: ಆಗಸ್ಟ್ 10 ರಂದು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಮಾತ್ರೆ ವಿತರಣೆ

ಉಡುಪಿ: ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್‌ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐ.ಟಿ.ಐ ನರ್ಸಿಂಗ್ ಕಾಲೇಜು, ಪ್ರಥಮ ವರ್ಷದ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಶಾಲಾ- ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಹಾಗೂ ಶಾಲೆಯಿಂದ ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ […]

ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಗೆ ಅದ್ದೂರಿ ಸ್ವಾಗತ: ಜಿಲ್ಲಾಡಳಿತದಿಂದ ಸನ್ಮಾನ ಕಾರ್ಯಕ್ರಮ

ಉಡುಪಿ: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು, ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಇಂದು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಜಿಲಾಧಿಕಾರಿ ಕೂರ್ಮಾರಾವ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಪೌರಾಯುಕ್ತ ಡಾ.ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ […]

ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ನಿಷೇಧ: ಜಿಲ್ಲಾಧಿಕಾರಿಗಳಿಂದ ದೂರುಗಳ ವಿಚಾರಣೆ

ಉಡುಪಿ: ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆಗುಂಬೆ ಘಾಟಿಯಲ್ಲಿ ಲಘು ವಾಹನ ಮತ್ತು ಬಸ್ ಸಂಚಾರಕ್ಕೆ ಅನುವು; ಘನ ವಾಹನಗಳಿಗೆ ಆಗಸ್ಟ್ 31 ರ ವರೆಗೆ ನಿಷೇಧ: ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ಆಗಸ್ಟ್ 31 ರ ವರೆಗೆ ನಿಷೇಧಿಸಲಾಗಿದೆ. ಆದಾಗ್ಯೂ, ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಮನವಿ ಬರುತ್ತಿರುವುದರಿಂದ ಮತ್ತು ಈಗಾಗಲೇ ಭೂಕುಸಿತದಿಂದಾಗಿ ರಸ್ತೆ ಬದಿಯಲ್ಲಿ ಬಿದ್ದು ಹೋಗಿದ್ದ ಗಾರ್ಡ್ ವಾಲ್ ನ ಮರು ನಿರ್ಮಾಣ ಕಾರ್ಯ ಕೈಗೊಂಡಿದ್ದು ಸದ್ಯ ತಾತ್ಕಾಲಿಕ ದುರಸ್ತಿ ಮುಂದುವರಿದಿದ್ದು, ದುರಸ್ಥಿ ಸಂಪೂರ್ಣವಾಗಿ ಮುಗಿಯಲು ಎರಡು ವಾರಗಳ ಕಾಲಾವಧಿ ಬೇಕಾಗಿರುವುದರಿಂದ ಹಾಗೂ ಪ್ರಸ್ತುತ ಆಗುಂಬೆಯಲ್ಲಿ […]

ಕುದಿ ಗ್ರಾಮದ ಗ್ಯಾಸ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ, ತಕ್ಷಣ ಕಾರ್ಯಾಚರಣೆ, ತಪ್ಪಿದ ಭಾರೀ ಅನಾಹುತ: ಇದು ರಾಸಾಯನಿಕ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ

ಉಡುಪಿ: ಉಡುಪಿ ತಾಲೂಕಿನ ಕುದಿ ಗ್ರಾಮದ ಜನತೆಗೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದರು, ಗ್ರಾಮದಲ್ಲಿದ್ದ ಎ.ಜಿ.ಎಸ್. ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿತ್ತು. ಇಂದು ಬೆಳಗ್ಗೆ 8.50 ಕ್ಕೆ ಕುದಿ ಗ್ರಾಮದಲ್ಲಿರುವ ಎ.ಜಿ.ಎಸ್ ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ ಕಂಡು ಬಂದಿದ್ದು, ತಕ್ಷಣವೇ ಅಲ್ಲಿನ ಸಿಬ್ಬಂದಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಉಚಿತ ದೂರವಾಣಿ ಸಂಖ್ಯೆ 1077 ಗೆ ಘಟನೆ […]