ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಭೇಟಿ
ಉಡುಪಿ: ಕಾಪು ತಾಲೂಕಿನ ಮುಳೂರಿನ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲಾಧಿಕಾರಿ ಕೂರ್ಮಾ ರಾವ್ ಜೊತೆಗಿದ್ದರು. ಕುಂದಾಪುರ ಎಸಿ ರಾಜು ಮತ್ತಿತರರು ಉಪಸ್ಥಿತರಿದ್ದರು. ಕೃಪೆ: ಟ್ವಿಟರ್
ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 11 ರಂದು ಶಾಲೆಗಳಿಗೆ ರಜೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ.
ಬಕ್ರೀದ್ ಹಿನ್ನೆಲೆ ಜಾನುವಾರುಗಳ ಅನಧಿಕೃತ ವಧೆ, ಸಾಗಾಣಿಕೆ ಮೇಲೆ ನಿರ್ಬಂಧ: ಕಣ್ಗಾವಲು ಪಡೆ ರಚನೆ
ಉಡುಪಿ: ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಇರುವ ಚೆಕ್ […]
ಹೆದ್ದಾರಿಯಲ್ಲಿ ಅಪಘಾತದಿಂದ ಸಾವು ಸಂಭವಿಸಿದರೆ ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿ
ಉಡುಪಿ: ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ನೋವುಗಳಾದಲ್ಲಿ ಸಂಬಂಧಪಟ್ಟ ಹೆದ್ದಾರಿ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ […]
ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್: ಜುಲೈ 8-9 ರಂದು ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅತ್ಯಾಧಿಕ ಮಳೆಯಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಅಂಗನವಾಡಿ ಕೇಂದ್ರ, ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ- 8 ಮತ್ತು 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗೆ ಟೋಲ್ ಫ್ರೀ ನಂಬರ್ 1077 ಅಥವಾ 080-2574802 […]