ಸಾಮಾಜಿಕ ಜಾಲತಾಣದಲ್ಲಿ ರಜೆ ಬಗ್ಗೆ ಸುಳ್ಳು ಸುದ್ದಿ: ಜಿಲ್ಲಾಡಳಿತದಿಂದ ಸೈಬರ್ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಗೆ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ, ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತವು ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ […]
ಜಿಲ್ಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ಕೊಡದೆ ಎಂದಿನಂತೆ ತರಗತಿ ನಡೆಸಿದ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆ
ಕಾರ್ಕಳ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂದಿನಂತೆ ತರಗತಿ ನಡೆದಿದೆ. ಮಳೆಯ ವಿಕೋಪಕ್ಕೆ ಮಕ್ಕಳು ಗುರಿಯಾಗದಿರಲೆಂದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಸಾರುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ, ಇಲ್ಲಿನ ಆಡಳಿತ ಮಂಡಳಿ ಆದೇಶಕ್ಕೆ ಕಿಮ್ಮತ್ತು ನೀಡದೆ ತರಗತಿ ನಡೆಸಿದೆ. ಶಾಲೆಯು ತಮ್ಮ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆತಂದು ಎಂದಿನಂತೆ ತರಗತಿಯನ್ನು ನಡೆಸಿರುವುದು […]
ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಚುನಾವಣಾಧಿಕಾರಿಗಳ ನೇಮಕ
ಉಡುಪಿ: ಬ್ರಹ್ಮಾವರ ತಾಲೂಕು ಹೆಗ್ಗುಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ ಹಾಗೂ ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಉಪ್ಪೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಕೊಕ್ಕರ್ಣೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದೇವೇಂದ್ರ ಕೆ ಮೋಗೆರ, ನಾಲ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಸೈಬ್ರಕಟ್ಟೆ ಪಶು […]
ಆಗಸ್ಟ್ 12 ರಿಂದ 14 ರವರೆಗೆ ಜಿಲ್ಲಾಮಟ್ಟದ ಯೋಗಾಥಾನ್: 10000 ಜನರಿಗೆ ಏಕಕಾಲದಲ್ಲಿ ತರಬೇತಿ
ಉಡುಪಿ: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ […]
ಮಳೆ ಸಂಬಂಧಿತ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1077 ಅನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ
ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ನಿಲ್ಲದೇ […]