ಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಅಮಿತ್ ಶಾ ಭೇಟಿ: ಕಾನೂನು ಎಲ್ಲರಿಗೂ ಒಂದೇ ಎಂದ ಗೃಹ ಸಚಿವ
ನವದೆಹಲಿ: ಬಿಜೆಪಿ ಸಂಸದ ಮತ್ತು ದೇಶದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಒಲಿಂಪಿಕ್ ಕ್ರೀಡಾಪಟು ಬಜರಂಗ್ ಪೂನಿಯಾ ಅವರು ಶನಿವಾರ ಸಂಜೆ ಗೃಹ ಸಚಿವರನ್ನು ಅವರ ದೆಹಲಿಯ ಮನೆಯಲ್ಲಿ ಭೇಟಿಯಾದರು ಎಂದು ಎನ್.ಡಿ.ಟಿ.ವಿ ವರದಿ ತಿಳಿಸಿದೆ. ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಸಭೆಯಲ್ಲಿ ಪುನಿಯಾ, […]