10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]

ಒಬಿಸಿ ಮೋರ್ಚಾ ವತಿಯಿಂದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, […]

ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್‌ಕ್ಲೇವ್‌ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ನಿರ್ಧಾರ; ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ […]

ದೇಶದ ಉಜ್ವಲ ಭವಿಷ್ಯಕ್ಕಾಗಿ ಮಗದೊಮ್ಮೆ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಶ್ರಮ: ಶೋಭಾ ಕರಂದ್ಲಾಜೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ […]