ಆನಂದ ಎನ್. ಪುತ್ರನ್ ನಿಧನ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣರವರ ತಂದೆ ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಯಶ್ಪಾಲ್ ಸುವರ್ಣ ಮತ್ತು ಅವರ ಕುಟುಂಬ ವರ್ಗ, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಹಿರಿಯರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಮೈಯೆಲ್ಲಾ ಹಿಂದೂ ವಿರೋಧಿ ವಿಷ ತುಂಬಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅಪ್ಪಟ ದೇಶ ಭಕ್ತ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಹೆಸರೆತ್ತಲೂ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜ ಒಡೆಯುವ ದುಷ್ಕೃತ್ಯದಲ್ಲಿ ತೊಡಗಿರುವುದು ಜಗಜ್ಜಾಹೀರಾಗಿದೆ. ‘ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಬ್ಯಾನರ್ ಯಾಕೆ ಹಾಕಿದ್ದೀರಿ’ ಎಂದಿರುವ ಸಿದ್ದುಗೆ ಹಿಂದೂ ಏರಿಯಾಕ್ಕೆ […]
ಅಟಲ್ ಜೀ ಮೇರು ವ್ಯಕ್ತಿತ್ವ ಮತ್ತು ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಸುರೇಶ್ ನಾಯಕ್
ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಭಾರತೀಯ ಜನ ಸಂಘದ ನಂತರ ಭಾರತೀಯ […]
ಆಗಸ್ಟ್ 15 ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ತಿರಂಗಾ ಯಾತ್ರೆ
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ‘ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ. ಈ ತಿರಂಗಾ ಯಾತ್ರೆಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, […]
ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ ಅಭಿಯಾನ: ಜಿಲ್ಲಾ ಬಿಜೆಪಿ ವತಿಯಿಂದ ರಾಷ್ಟ್ರಧ್ವಜ ವಿತರಣೆ
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆಯಂತೆ ‘ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಭೇಟಿಯಾಗಿ ರಾಷ್ಟ್ರಧ್ವಜವನ್ನು ಹಸ್ತಾಂತರಿಸಲಾಯಿತು. ಮಣಿಪಾಲ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಹೆಚ್.ಎಸ್. ಬಲ್ಲಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ವಿದ್ವಾಂಸ ಬನ್ನಂಜೆ ಬಾಬು […]