ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಸದಸ್ಯರ ಆಯ್ಕೆ

ಉಡುಪಿ: ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಉಡುಪಿ ಜಿಲ್ಲೆಯ ಪದಾಧಿಕಾರಿಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಜಿಲ್ಲಾಉಪಾಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಆಯ್ಕೆಯಾಗಿದ್ದರೆ, ಜಿಲ್ಲಾಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಮತ್ತು ಅನಿತಾ ಶ್ರೀಧರ್ ಹಾಗೂ ಜಿಲ್ಲಾ ವಕ್ತಾರರಾಗಿ ಕೆ. ರಾಘವೇಂದ್ರ ಕಿಣಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಡುಪಿ: ಜು.30 ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಶೃದ್ಧಾಂಜಲಿ ಸಭೆ

ಉಡುಪಿ: ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರನ್ನು ಎನ್ಕೌಂಟರ್ ಮಾಡಲು ಆಗ್ರಹಿಸಿದ ಕುಯಿಲಾಡಿ; ಜಿಹಾದಿಗಳಿಗೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿ ಎಂದ ಯಶಪಾಲ್ ಸುವರ್ಣ

ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ‌ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿ […]

ಮಿಷನ್ 150ರ ಜೊತೆ ಜಿಲ್ಲೆಯ‌ ಐದೂ ಸ್ಥಾನ ಗೆಲ್ಲುವುದು ಬಿಜೆಪಿ ಗುರಿ: ಕುಯಿಲಾಡಿ‌ ಸುರೇಶ್ ನಾಯಕ್

ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಮತ್ತೊಮ್ಮೆ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ […]

ಉಡುಪಿ ಜಿಲ್ಲೆಗೆ 100 ಬೆಡ್‌ಗಳ ಇ.ಎಸ್.ಐ ಆಸ್ಪತ್ರೆ ಮಂಜೂರು: ಬಹುಕಾಲದ ಬೇಡಿಕೆ ನನಸಾಗಿದೆ ಎಂದ ಕುಯಿಲಾಡಿ

ಉಡುಪಿ: ಕೇಂದ್ರ ಸರಕಾರದಿಂದ ಉಡುಪಿ ಜಿಲ್ಲೆಗೆ 100 ಬೆಡ್ ಗಳ ಇ.ಎಸ್.ಐ ಆಸ್ಪತೆ ಮಂಜೂರಾಗಿದ್ದು, ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ನನಸಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತಪಡಿದ್ದಾರೆ. ಜನತೆಯ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಹಾಗೂ ಉಡುಪಿ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಯಶಸ್ವಿಯಾದ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ […]