ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ಉಡುಪಿ: ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಮಾಜ ಸೇವಕ ವೇದಮೂರ್ತಿ ವಿಠ್ಠಲ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿ, ಹೆಜಮಾಡಿ ಮಲ್ಯರ ಮಠ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚರಾಗಿ ಸೇವೆ ಸಲ್ಲಿಸಿರುವ ವೇದಮೂರ್ತಿ ವಿಠ್ಠಲ ಭಟ್ ರವರು ಜು.1ರಂದು ನಿಧನರಾದರು. ಅವಿವಾಹಿತರಾಗಿದ್ದ ಅವರಿಗೆ 89 ವರ್ಷ ವಯಸ್ಸಾಗಿತ್ತು. ಹೆಜಮಾಡಿ ಗ್ರಾಮವೂ ಸೇರಿದಂತೆ ಕಾಪು ತಾಲೂಕಿನಲ್ಲಿ ಸಂಘದ […]

ಉದಯಪುರ ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಎಂಬ ಅಮಾಯಕ ವ್ಯಕ್ತಿಯ ಶಿರಚ್ಛೇದಗೈದು ಹತ್ಯೆ ಮಾಡಿರುವ ಭಯೋತ್ಪಾದಕ ಜಂತುಗಳನ್ನು ಕೇವಲ ವ್ಯಕ್ತಿಗಳು ಮಾಡಿದ ಕೃತ್ಯ ಎಂದು ಸಂಭೋಧಿಸಿ, ಇಂತಹ ಘಟನೆಗಳು ಬಿಜೆಪಿ ಪ್ರೇರಿತ ಭಯೋತ್ಪಾದನೆ ಎಂದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದಿರುವ ಬಿ.ಕೆ. ಹರಿಪ್ರಸಾದ್ ರವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ […]

ಮೇ 15- ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶವನ್ನು ಉದ್ಘಾಟಿಸಲಿರುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ […]

ಪ್ರಮೋದ್‌ ಮಧ್ವರಾಜ್‌ ಬಿಜೆಪಿ ಸೇರ್ಪಡೆ; ವರಿಷ್ಠರ ನಿರ್ಧಾರವೆ ಅಂತಿಮ: ಕುಯಿಲಾಡಿ

ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್, ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದ್ದು ಇನ್ನು ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು, ಪ್ರಮೋದ್‌ ಪಕ್ಷ ಸೇರ್ಪಡೆಯಾಗಲು ಯಾವುದೇ ಹುದ್ದೆಯ ಷರತ್ತು ಹಾಕಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು. ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಬಾಗಿಲು ಯಾವತ್ತೂ ಮುಚ್ಚಿಲ್ಲ, ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು […]

ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ : ಕುಯಿಲಾಡಿ ಸುರೇಶ್ ನಾಯಕ್

  ಉಡುಪಿ: ಸ್ವಾತಂತ್ರ್ಯಾ ನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷವು ಬ್ರಹ್ಮಾಂಡ ಭ್ರಷ್ಟಾಚಾರಗೈದಿರುವುದನ್ನು ಮರೆತು ಕಾಂಗ್ರೆಸ್ ಮುಖಂಡ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಬಿಜೆಪಿ ಬಗ್ಗೆ ಲಘುವಾಗಿ ಮಾತನಾಡಿರುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.