ಉಡುಪಿ: ಶುಕ್ರವಾರ ಸುರಿಯಲಿದೆ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ,

ಉಡುಪಿ: ಕರಾವಳಿ ಭಾಗಕ್ಕೆ ಕ್ಯಾರ್ ಚಂಡಮಾರುತದ ಪರಿಣಾಮ ತೀವ್ರವಾಗಿ ಕಾಣಿಸಿಕೊಳ್ಳುವ ನಿರೀಕ್ಷೆಯಿದ್ದು ಮುಂಜಾಗ್ರತಾ ಕ್ರಮವಾಗಿ, ಅ.25ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ – ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ  ಜಿಲ್ಲಾಡಳಿತ ರಜೆ ಘೋಷಿಸಿದೆ. ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ಈ ಮಾರುತಗಳ ಹೊಡೆತ ಕರಾವಳಿಗೆ ತಟ್ಟಲಿದೆ ಎನ್ನಲಿರುವ […]