ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ ನೋಂದಣಿ ರದ್ಧತಿ ಅಭಿಯಾನ: ತಪ್ಪಿತಸ್ಥರ ಮೇಲೆ ಕಾನೂನು ಕ್ರಮ
ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಠಿಸಿ, ಮಂಡಳಿಯಿಂದ ನೀಡುವ ಕಾರ್ಮಿಕರ ಗುರುತಿನ ಚೀಟಿ ಪಡೆದು, ಸೌಲಭ್ಯಗಳನ್ನು ಪಡೆಯುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿರುವುದರಿಂದ ಜಿಲ್ಲೆಯಾದ್ಯಂತ ಫೆಬ್ರವರಿ 25 ರ ವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ಧತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತದೆ. ಈಗಾಗಲೇ ಕಟ್ಟಡ ಮತ್ತು ಇತರೆ ನಿರ್ಮಾಣ […]