ಸಮವಸರಣ ಪೂಜೆಯೊಂದಿಗೆ ಧರ್ಮಸ್ಥಳ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ತೆರೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಗುರುವಾರದಂದು ರಾತ್ರಿ ಬಸದಿಯಲ್ಲಿ ಭಗವಾನ್‌ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಮುಕ್ತಾಯವಾದವು. ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಶ್ರುತದೇವಿ ಹಾಗೂ ಗಣಧರ ಪರಮೇಷ್ಠಿಗಳ ಅಷ್ಟವಿಧಾರ್ಚನೆ ಪೂಜೆ ಸುಶ್ರಾವ್ಯ ಗಾಯನದೊಂದಿಗೆ ಸಂಪನ್ನಗೊಂಡಿತು. ಬಾಹುಬಲಿ ಸೇವಾ ಸಮಿತಿಯ ಶ್ರಾವಕರು, ಶ್ರಾವಕಿಯರಿಂದ ಸುಶ್ರಾವ್ಯವಾಗಿ ಭಕ್ತಿಗೀತೆಗಳ ಗಾಯನ ಪೂಜೆಗೆ ವಿಶೇಷ ಮೆರುಗನ್ನು ನೀಡಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಷಟ್ಕಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿಗ್ರಂಥವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. […]

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮ೦ಜುನಾಥ ಸ್ವಾಮಿಯ ಆಲಯದಲ್ಲಿ ಲಕ್ಷದೀಪೋತ್ಸವದ ಸಂಭ್ರಮ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀಮ೦ಜುನಾಥ ಸ್ವಾಮಿ ದೇವಾಲಯದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಲಕ್ಷದೀಪೋತ್ಸವಕ್ಕೆ ಶನಿವಾರದ೦ದು ಚಾಲನೆ ನೀಡಲಾಗಿದೆ. ಶನಿವಾರದಂದು ಬೆಳಿಗ್ಗೆ ಶ್ರೀಮ೦ಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾ೦ಗಣದಲ್ಲಿ ಏರ್ಪಡಿಸಲಾದ ವಸ್ತುಪ್ರದರ್ಶನವನ್ನು ಬೆಳ್ತ೦ಗಡಿಯ ಶಾಸಕ ಹರೀಶ್ ಪೂ೦ಜ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇ೦ದ್ರ ಹೆಗ್ಡೆಯವರು ಉದ್ಘಾಟಿಸಿದ್ದರು. ಸೋಮವಾರದಂದು ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಲಕ್ಷದೀಪೋತ್ಸವವನ್ನು ಆಚರಿಸಲಾಗುತ್ತಿದ್ದು, ಭಕ್ತರು ಸಹಸ್ರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ದೇವಸ್ಥಾನದ ಮುಖ್ಯದ್ವಾರವನ್ನು […]

ನ.19-23ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ

ಬೆಳ್ತಂಗಡಿ: ಭಗವಾನ್ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು ನ. 19-23ರವರೆಗೆ ಜರುಗಲಿದ್ದು, ನಾಡಿನ ಗಣ್ಯರು, ವಿದ್ವಾಂಸರು ಮತ್ತು ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನ.22 ರಂದು ಜರುಗಲಿರುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯದ ಸಚಿವೆ ಸ್ಮೃತಿ ಇರಾನಿ ಇವರು ಉದ್ಘಾಟಿಸಲಿದ್ದಾರೆ. ಬಹುಶ್ರುತ ವಿದ್ವಾಂಸರಾದ ಎಂ.ಆರ್ ಸತ್ಯನಾರಾಯಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಸ್ರಿಕಟ್ಟೆ ಧರ್ಮಗುರುಗಳಾದ ಫಾ.ಮಾರ್ಸೆಲ್ ಪಿಂಟೋ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ಇ […]