ಮನೆ ರಿಪೇರಿಗೆ ಅರಣ್ಯ ಇಲಾಖೆಯಿಂದ ಆಕ್ಷೇಪ: ಸ್ಥಳ ಪರಿಶೀಲನೆಗೆ ಆದೇಶಿಸಿದ ಉಸ್ತುವಾರಿ ಸಚಿವೆ

ಉಡುಪಿ: ಸೋಮವಾರ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಮದ ಮಾಧವ ವಾಗ್ಲೆಯವರು 5 ಸೆಂಟ್ಸ್ ಜಮೀನಿನಲ್ಲಿ ಹಳೆಯ ಮನೆ ಹೊಂದಿದ್ದು, ತಮ್ಮ ಹೆಸರಿಗೆ ಖಾತೆ, ಪಹಣಿ ಹೊಂದಿ ಅಲ್ಲಿಯೇ ವಾಸಿಸುತ್ತಿದ್ದು, ಮನೆಯ ರಿಪೇರಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದಾಗ ಅರಣ್ಯ ಇಲಾಖೆಯ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಆಕ್ಷೇಪಣೆ ಇದೆ ಎಂದು ಅನುಮತಿ ನೀಡಿರುವುದಿಲ್ಲ ಎಂದು ತಮ್ಮ ಸಮಸ್ಯೆಯನ್ನು ಅಹವಾಲು ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ […]

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ತಲೆಬಾಗಬೇಕಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳು ಮೂರು ದಿನ ದೆಹಲಿಯಲ್ಲಿದ್ದು ಕಾವೇರಿ ನೀರು ಹಂಚಿಕೆ ಕುರಿತಾಗಿ ಚರ್ಚೆ ಮಾಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಗಿ ಪ್ರಾರ್ಥಿಸಬೇಕು. ರಾಜ್ಯಕ್ಕೆ ಅನ್ಯಾಯ ಆಗಬಾರದು ಎಂಬುದು ನನ್ನ ನಿಲುವಾಗಿದೆ. ಕಾಂಗ್ರೆಸ್ ಜನಪರವಾಗಿದ್ದು,‌ ಜನರನ್ನು ಬಿಟ್ಟು ಬೇರೆ ಏನು ಮಾಡಲು ಸಾಧ್ಯವಿಲ್ಲ. ನೀರಾವರಿ […]

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ; ಪ್ರವಾಸಿಗರಿಗೆ ಉತ್ತಮ ಮೂಲ ಸೌಕರ್ಯ ಒದಗಿಸಿ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಜಿಲ್ಲೆಯ ಪ್ರಕೃತಿ ಸೌಂದರ್ಯ, ಧಾರ್ಮಿಕ ಕೇಂದ್ರಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ ಇಲ್ಲಿನ ಪ್ರವಾಸಿತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ, ವಾಹನಗಳ ಪಾರ್ಕಿಂಗ್, ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ […]

ಉಡುಪಿ: ಇಂದು ಗೃಹಜ್ಯೋತಿ ಯೋಜನೆಗೆ ಚಾಲನೆ

ಉಡುಪಿ: ಇಂಧನ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಚಾಲನೆ ನೀಡಲಾಗುವುದು. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ […]

ಜುಲೈ 19 ರಿಂದ ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಪ್ರಾರಂಭ: ನೋಂದಾಯಿಸುವ ಮಾಹಿತಿ ಇಲ್ಲಿದೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಗಲಿದೆ. ನೋಂದಣಿ ಉಚಿತವಾಗಿದ್ದು ಅರ್ಜಿ ಸಲ್ಲಿಸಲು ಯಾವುದೇ ಗಡುವು ಇಲ್ಲ. ಪಡಿತರ ಚೀಟಿಯಲ್ಲಿ (ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ಗಳು) ನಮೂದಿಸಿರುವಂತೆ ಕುಟುಂಬದ ಮಹಿಳೆಯು ಅರ್ಹ ಫಲಾನುಭವಿಯಾಗುತ್ತಾರೆ. ಆದಾಗ್ಯೂ, ಮಹಿಳೆ ಅಥವಾ ಆಕೆಯ ಪತಿ ತೆರಿಗೆದಾರರಾಗಿರಬಾರದು (ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರು). ಈ ಯೋಜನೆಯ ಮೂಲಕ 1.28 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿವೆ. ಫಲಾನುಭವಿಯು ಪಡಿತರ ಚೀಟಿ […]