ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ. ಈ […]

ಉಸ್ತುವಾರಿ ಸಚಿವರಿಂದ ಬಾಲಕರ ಬಾಲ ಮಂದಿರ ಪರಿಶೀಲನೆ

ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಬಾಲಕರ ಬಾಲ ಮಂದಿರಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಮಂದಿರದಲ್ಲಿ ಮಕ್ಕಳ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮಕ್ಕಳಿಗೆ ಯಾವುದೇ ರೀತಿಯ ಕುಂದುಕೊರತೆ ಹಾಗೂ ಸಮಸ್ಯೆಗಳಾಗಂತೆ ಎಚ್ಚರಿಕೆ ವಹಿಸುವಂತೆ ಮತ್ತು ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ […]

ಉಡುಪಿಯಲ್ಲಿ ಹೆಚ್ಚಿನ ನರ್ಮ ಬಸ್ ಗಳನ್ನು ಓಡಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು “ಶಕ್ತಿ ಯೋಜನೆ” ಉಚಿತ ಬಸ್ ಪ್ರಯಾಣವನ್ನು ಜಿಲ್ಲೆಯಲ್ಲಿ ಉದ್ಘಾಟಿಸಿದ ಬಳಿಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸಿ ಹೆಚ್ಚಿನ ಬಸ್‌ಗಳನ್ನು ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು […]

ಉಸ್ತುವಾರಿ ಸಚಿವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಅವರು ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್,ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್,ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗಾಗಿ ಶಕ್ತಿ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ 20,000 […]