ಜನಸಾಮಾನ್ಯರ ಅಹವಾಲುಗಳಿಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ: ಲಕ್ಷ್ಮೀ ಆರ್. ಹೆಬ್ಬಾಳ್ಕರ್

ಉಡುಪಿ: ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಜನರು ನಮ್ಮನ್ನು ನಂಬಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಅವರಿಗೆ ನೀಡಿರುವ ಭರವಸೆಗಳನ್ನುಹಂತಹಂತವಾಗಿ ನೂರು ದಿನಗಳಲ್ಲಿ ಈಡೇರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಅದರ ಜೊತೆಯಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ […]

ಜುಲೈ 8 ರಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಜಿಲ್ಲಾ ಪ್ರವಾಸ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಪಡುಬಿದ್ರಿ ಮತ್ತು ಉಡುಪಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವರು. ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ […]