ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ಭವನ ನಿರ್ಮಾಣಕ್ಕೆ ಶೀಘ್ರ ಭೂಮಿ ಮಂಜೂರು: ಪೇಜಾವರ ಶ್ರೀಗಳಿಗೆ ಯೋಗಿ ಆದಿತ್ಯನಾಥ್ ಭರವಸೆ

ಉಡುಪಿ: ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರು ಆಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ರಾಮಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅಯೋಧ್ಯೆಯಲ್ಲಿ ಭವಿಷ್ಯದಲ್ಲಿ ರಾಮಮಂದಿರಕ್ಕಾಗಿ ತೆರಳುವ ರಾಜ್ಯದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಭವ್ಯ ಕರ್ನಾಟಕ ಯಾತ್ರಿ ಭವನ ನಿರ್ಮಿಸಲು ಭೂಮಿ ಒದಗಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದು ಮನವಿ ಮಾಡಿದ್ದರು. […]