ಸಲಿಂಗ ವಿವಾಹವನ್ನು ಕಾನೂನು, ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರದಿಂದ ದೆಹಲಿ ಹೈಕೋರ್ಟ್ ಸ್ಪಷ್ಟನೆ
ನವದೆಹಲಿ: ಸಲಿಂಗ ವಿವಾಹ ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವೂ ಇಲ್ಲ. ಸಮಾಜವೂ ಅದನ್ನು ಒಪ್ಪುವುದಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಸಲಿಂಗ ವಿವಾಹಕ್ಕೆ ಹಿಂದೂ ವಿವಾಹ ಕಾಯ್ದೆ (ಎಚ್‌ಎಂಎ) ಹಾಗೂ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಮಾನ್ಯತೆ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಹಾಗೂ ನ್ಯಾಯಮೂರ್ತಿ ಪ್ರತೀಕ್ ಜಲಾನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಇಂದು ಅದರ ಬಗ್ಗೆ ವಿಚಾರಣೆ ನಡೆಸಿತು. ಸಂಸ್ಕಾರಯುತವಲ್ಲದ […]