ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ಜಾರಿಗೊಳಿಸುವುದು ಖಚಿತ: ಬೊಮ್ಮಾಯಿ
ಉಡುಪಿ: ಲವ್ ಜಿಹಾದ್ ವಿರುದ್ಧ ಕರ್ನಾಟಕದಲ್ಲಿ ಆದಷ್ಟು ಬೇಗ ಕಾನೂನು ಜಾರಿಗೊಳಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀರ್ಪಿನ ಬಳಿಕ ಹರಿಯಾಣ, ಮಧ್ಯಪ್ರದೇಶ ಸರ್ಕಾರ, ಉತ್ತರ ಪ್ರದೇಶ ಸರ್ಕಾರಗಳು ಲವ್ ಜಿಹಾದ್ ಬಗ್ಗೆ ಕಾನೂನು ರೂಪಿಸಲು ನಿರ್ಧರಿಸಿವೆ. ಯುಪಿ ಸರ್ಕಾರ ಕಾನೂನು ಜಾರಿಗೊಳಿಸಿದೆ. ಅದರಂತೆ ಕರ್ನಾಟಕದಲ್ಲೂ ಲವ್ ಜಿಹಾದ್ ತಡೆಗೆ ಕಾನೂನು ತರಲು ತೀರ್ಮಾನಿಸಲಾಗಿದೆ ಎಂದರು. ಕಾನೂನನ್ನು ಯಾವ ರೀತಿ […]