ಅರ್ಜಿದಾರರ ಮನೆ ಬಾಗಿಲಿಗೆ ಜನನ ಮರಣ ಪ್ರಮಾಣ ಪತ್ರ ಯೋಜನೆಗೆ ಚಾಲನೆ

ಉಡುಪಿ: ನಗರಸಭೆವತಿಯಿಂದ ಜನನ ಮರಣ ಪ್ರಮಾಣಪತ್ರಗಳನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ವಿಶಿಷ್ಠ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜೂನ್ 8 ರಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿದರು ಮತ್ತು ಜಿಲ್ಲಾ ಪಂಚಾಯತ್ ನ ಸಂಪನ್ಮೂಲ ಕೇಂದ್ರದಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಕೈ […]

ನೆರೆ ಸಂತ್ರಸ್ಥರಿಗೆ ತಕ್ಷಣ ರಕ್ಷಣೆ ಒದಗಿಸಿ ಅಗತ್ಯ ನೆರವು ಕಲ್ಪಿಸಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಕ್ಷಣದಲ್ಲಿ ರಕ್ಷಣೆ ಕೊಡುವುದರ ಜೊತೆಗೆ ಆಶ್ರಯ ಒದಗಿಸಿ ದೈನಂದಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ನೆರವು ಒದಗಿಸಿ ಸಹಜ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ಅತಿವೃಷ್ಠಿಯಾಗುತ್ತಿದ್ದು ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ […]

ಗೃಹ-ಲಕ್ಷ್ಮಿ ಯೋಜನೆ: ಹಣ ಪಡೆಯಲು ಅತ್ತೆಗೆ ಅರ್ಹತೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಭರವಸೆ ನೀಡಿತ್ತು. ಆದರೆ ಇದೀಗ ಈ ಯೋಜನೆಯನ್ವಯ 2000 ರೂ ಪಡೆಯಲು ಅತ್ತೆ-ಸೊಸೆಯರಲ್ಲಿ ತಿಕ್ಕಾಟ ನಡೆಯುತ್ತಿರುವ ಪ್ರಸಂಗಗಳು ವರದಿಯಾಗುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಣಾಳಿಕೆಯಲ್ಲಿ ಸ್ಪಷ್ಟತೆಯ ಕೊರತೆ ಇದ್ದು, ಕುಟುಂಬದ ಯಜಮಾನಿಯಾದ ಮಹಿಳೆಗೆ ಮಾತ್ರ ಪ್ರತೀ ತಿಂಗಳು 2000 ರೂ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. […]