ಸಾಲ ಮತ್ತು ಠೇವಣಿ ಪ್ರಮಾಣ ಸರಿದೂಗಿಸಲು ಬ್ಯಾಂಕ್ ಗಳಿಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಸೂಚನೆ

ಉಡುಪಿ: ವಿವಿಧ ಸರಕಾರಿ ಯೋಜನೆಗಳ ಸಾಲ ಪಡೆಯಲು ಫಲಾನುಭವಿಗಳು ಬ್ಯಾಂಕ್‌ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಆದ್ಯತೆಯ ಮೇಲೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಂಜೂರು ಮಾಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸೂಚನೆ ನೀಡಿದರು. ಅವರು ಸೋಮವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಲ ಮತ್ತು ಠೇವಣಿ ಪ್ರಮಾಣ ರಾಜ್ಯಕ್ಕೆ ಹೋಲಿಸಿದ್ದಲ್ಲಿ ಕಡಿಮೆ ಇದ್ದು, ಇದನ್ನು ಸರಿದೂಗಿಸಲು […]

ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಾಲದ ಅರ್ಜಿಗಳನ್ನು ತಿರಸ್ಕರಿಸಬೇಡಿ: ಜಿ.ಪಂಚಾಯತ್ ಸಿ.ಇ.ಒ

ಉಡುಪಿ: ಸರ್ಕಾರಿ ಯೋಜನೆಗಳ ಫಲಾನುಭವಿಗಳು ಸಲ್ಲಿಸುವ ಅರ್ಜಿಗಳನ್ನು ಸಣ್ಣಪುಟ್ಟ ಕಾರಣಗಳಿಗೆ ತಿರಸ್ಕರಿಸದೆ ಅವುಗಳನ್ನು ಪುನರ್ ಪರಿಶೀಲನೆ ನಡೆಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಹಾಗೂ ಸೂಕ್ತ ದಾಖಲೆಗಳ ಅಗತ್ಯವಿದ್ದಲ್ಲಿ ಫಲಾನುಭವಿಗಳಿಂದ ಅವುಗಳನ್ನು ಪಡೆದು ಸಾಲವನ್ನು ಮಂಜೂರು ಮಾಡುವ ಮೂಲಕ ಎಲ್ಲ ಬ್ಯಾಂಕ್‌ಗಳು ಸರ್ಕಾರಿ ಯೋಜನೆಗಳ ಗುರಿ ಸಾಧನೆಗೆ ನೆರವು ನೀಡಬೇಕು ಎಂದು ಜಿ.ಪಂಚಾಯತ್ ಸಿ.ಇ.ಒ ಪ್ರಸನ್ನ ಬ್ಯಾಂಕ್ ಅಧಿಕಾರಿಗಳಿಗೆ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ […]

ಸೆ. 20 ರಂದು ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯು ಸೆಪ್ಟಂಬರ್ 20 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಆಚರಣೆ: ಕೆನರಾ ಬ್ಯಾಂಕ್ ಸಿಂಡಿಕೇಟ್ ಗೋಲ್ಡನ್ ಜ್ಯೂಬಿಲಿ ಹಾಲ್‌ನಲ್ಲಿ ನೇರಪ್ರಸಾರ

ಉಡುಪಿ: ನವದೆಹಲಿಯ ವಿಜ್ಞಾನ ಭವನ್‌ನಲ್ಲಿ ನಡೆಯುವ ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 6 ರಂದು ಉದ್ಘಾಟಿಸಲಿದ್ದಾರೆ. ಭಾರತದ ಹಣಕಾಸು ಸಚಿವಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ಭಾರತ ಸರಕಾರದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಭಾರತದಾದ್ಯಂತ ಸುಮಾರು 75 ಜಿಲ್ಲೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದ್ದು, ಕರ್ನಾಟಕದಿಂದ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ನೇರ ಪ್ರಸಾರ ಕಾರ್ಯಕ್ರಮವನ್ನು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಉಡುಪಿ, ಇವರ […]