ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆ ಖಾಲಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ , ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿಗೆ ರಸಾಯನಶಾಸ್ತ್ರ ವಿಷಯಕ್ಕೆ M.sc ಹಾಗೂ B.Ed ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಗಳನ್ನು ಸದ್ರಿ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಲು ಜೂನ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಇಲಾಖೆ ಉಡುಪಿ, ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.