ಲೆಜೆಂಡರಿ ಬಾಲಿವುಡ್ ನಟ ದಿಲೀಪ್ ಕುಮಾರ್ ನಿಧನ
ಮುಂಬೈ: ಹಿಂದಿ ಚಿತ್ರರಂಗದ ಲೆಜೆಂಡರಿ ನಟ ದಿಲೀಪ್ ಕುಮಾರ್ (98) ಬುಧವಾರ ನಿಧನ ಹೊಂದಿದರು. ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜೂನ್ 30ರಂದು ದಿಲೀಪ್ ಕುಮಾರ್ ಅವರನ್ನು ಮುಂಬೈನ ಪಿ.ಡಿ.ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ಶ್ವಾಸಕೋಶತಜ್ಞ ಡಾ. ಜಲಿಲ್ ಪಾರ್ಕರ್ ಖಚಿತ ಪಡಿಸಿದ್ದಾರೆ. ಅದಕ್ಕೂ ಮುನ್ನ ಅವರು ಜೂನ್ 6ರಂದು ಶ್ವಾಸಕೋಶ ಸಂಬಂಧಿತ ಸಮಸ್ಯೆಯಿಂದಲೇ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಮುಂಬೈನ ಸಾಂತಾಕ್ರೂಸ್‌ನಲ್ಲಿ ಇಂದು ಸಂಜೆ […]