ತೆಕ್ಕಟ್ಟೆಯ ಮಾಲಾಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತಿ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಚಿರತೆ ಸೆರೆ ಹಿಡಿಯಲು ಇಟ್ಟ ಬೋನಿಗೆ ಶನಿವಾರ ತಡರಾತ್ರಿ ಸುಮಾರು 10 ವರ್ಷ ಪ್ರಾಯದ ಗಂಡು ಚಿರತೆ ಬಿದ್ದಿದ್ದು ಅರಣ್ಯ ಇಲಾಖೆಯವರು ಭಾನುವಾರ ಸೆರೆ ಹಿಡಿದಿದ್ದಾರೆ. ಮಾಲಾಡಿಯ ತೋಟವೊಂದರಲ್ಲಿ ಕಳೆದೊಂದು ತಿಂಗಳಿನಿಂದ ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲೆ ಅರಣ್ಯ ಇಲಾಖೆಯು ಬೋನು ಇಟ್ಟಿದ್ದರು. ತೋಪಿನ ಪಕ್ಕದಲ್ಲೇ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ, ದೇವಸ್ಥಾನವಿದ್ದು ಇದು ಜನ ಸಂಚಾರದ ಸ್ಥಳವಾಗಿತ್ತು. ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಅರಣ್ಯಾಧಿಕಾರಿಗಳು ಈ […]