ಉಡುಪಿ ಜಿಲ್ಲೆಯಲ್ಲಿ ಹರಾಜಾಗುವ ಮರಳು ಜಿಲ್ಲೆಯೊಳಗೆ ವಿನಿಯೋಗವಾಗಲಿ: ಕುಯಿಲಾಡಿ

ಉಡುಪಿ: ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಅಕ್ರಮ ಮರಳು ಸಂಗ್ರಹವನ್ನು ಮುಟ್ಟುಗೋಲು ಹಾಕಿ ಹರಾಜು ಪ್ರಕ್ರಿಯೆ ನಡೆಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಹರಾಜಾಗುವ ಮರಳು ಜಿಲ್ಲೆಯೊಳಗೆ ಮಾತ್ರ ವಿನಿಯೋಗವಾಗುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜರುಗಿಸಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಸರಕಾರದ ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಹಾಗೂ ಕಟ್ಟಡ, ರಸ್ತೆ, ಸೇತುವೆ ಮುಂತಾದ ಅಭಿವೃದ್ಧಿ ಕಾಮಗಾರಿ ಚಟುವಟಿಕೆಗಳು ಮರಳು ಪೂರೈಕೆಯನ್ನು ಅವಲಂಬಿಸಿರುವುದು ವಾಸ್ತವ. ಆದರೆ ಸಮರ್ಪಕ ಮರಳು ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಮಾತ್ರ […]