ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳ ಮಕ್ಕಳ ಕೈವಾಡವಿದ್ದರೂ ಹೊರಬರಲಿ: ಸಚಿವ ಸೋಮಣ್ಣ

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ರಾಜಕಾರಣಿಗಳ ಮಕ್ಕಳು ಸೇರಿಕೊಂಡಿದ್ದಾರೆ. ಅವರ ಹೆಸರನ್ನು ಮುಲಾಜಿಲ್ಲದೆ ಬಹಿರಂಗಪಡಿಸಬೇಕು ಎಂದು ವಸತಿ ಸಚಿವ ಸೋಮಣ್ಣ ಅಗ್ರಹಿಸಿದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ಯಾರೆಲ್ಲರು ಇದ್ದಾರೋ ಅವರೆಲ್ಲರನ್ನು ಪತ್ತೆಹಚ್ಚಬೇಕು. ಅದು ಎಷ್ಟೇ ದೊಡ್ಡ ಪ್ರಭಾವಿಯಾಗಿದ್ದರು ಆಗಿರಲಿ ಎಂದರು. ರಾಜಕಾರಣಿಗಳ ಮಕ್ಕಳೆಂದು ಮುಚ್ಚುಮರೆ ಮಾಡುವ ಅಗತ್ಯವಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲೇ ಬೇಕು. ಮಾದಕ ದ್ರವ್ಯಗಳ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.