ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸರಳ ರೀತಿಯಲ್ಲಿ ಪರ್ಯಾಯ ಆಚರಿಸೋಣ: ಉಡುಪಿಯ ಜನತೆಗೆ ಕರೆಕೊಟ್ಟ ಭಾವಿ ಪರ್ಯಾಯ ಕೃಷ್ಣಾಪುರ ಶ್ರೀಪಾದರು
ಉಡುಪಿ: ಉಡುಪಿಯ ಜನತೆ ನಾಡಹಬ್ಬ ಪರ್ಯಾಯ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ದೇಶದಲ್ಲಿ ಕೊರೊನಾ ಸೋಂಕಿನ ಹಾವಳಿ ಹೆಚ್ಚುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ಅಜಾಗರೂಕತೆಯಿಂದ ನಡೆದುಕೊಂಡರೆ ಮುಂದೆ ಸಂಭವಿಸಬಹುದಾದ ಅನಾಹುತಗಳಿಗೆ ನಾವೇ ಹೊಣೆಗಾರರಾಗುತ್ತೇವೆ. ಹೀಗಾಗಿ ತೀರಾ ಸಾಂಪ್ರದಾಯಿಕ ವಿಧಿಗಳಿಗೆ ಒತ್ತು ಕೊಟ್ಟು ಸರಳವಾಗಿ ಈ ಬಾರಿಯ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವವನ್ನು ನಡೆಸಲು ಸಮಿತಿ ತೀರ್ಮಾನಿಸಿದೆ. ಉಡುಪಿಯ ಸಮಸ್ತ ನಾಗರಿಕರು, ಶ್ರೀಕೃಷ್ಣನ ಭಕ್ತರು ಸರ್ಕಾರದ ಕೋವಿಡ್ ನಿಯಮಗಳನ್ನು ಕ್ರಮಬದ್ಧವಾಗಿ ಪಾಲಿಸಿಕೊಂಡು ಪರ್ಯಾಯೋತ್ಸವವನ್ನು ಉತ್ತಮವಾಗಿ ನಡೆಸಿಕೊಡಬೇಕೆಂದು ಭಾವಿ ಪರ್ಯಾಯ ಕೃಷ್ಣಾಪುರ […]