ಎಲ್ಐಸಿ ಷೇರು ಮಾರಾಟ ಪ್ರಸ್ತಾಪ ವಿರೋಧಿಸಿ ನೌಕರರ ಪ್ರತಿಭಟನೆ

ಉಡುಪಿ: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ)ದ ಷೇರು ಮಾರಾಟದ ಪ್ರಸ್ತಾಪವನ್ನು ವಿರೋಧಿಸಿ ವಿಮಾ ನೌಕರರ ಸಂಘದ ಉಡುಪಿ ವಿಭಾಗದ ನೇತೃತ್ವದಲ್ಲಿ ಎಲ್‌ಐಸಿ ನೌಕರರು‌ ಅಜ್ಜರಕಾಡಿನ ಎಲ್‌ಐಸಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಎಲ್‌ಐಸಿಯ ಷೇರು ಮಾರಾಟ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದು ಎಲ್‌ಐಸಿಯನ್ನು ಖಾಸಗೀಕರಣಗೊಳಿಸುವ ಭಾಗವಾಗಿದೆ. ಇದನ್ನು ವಿಮಾ ನೌಕರರ ಸಂಘ ಖಂಡಿಸುತ್ತದೆ ಎಂದು ವಿಮಾ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ಒಕ್ಕೂಟದ ಉಡುಪಿ ವಿಭಾಗದ […]