ಎಲ್.ಐ.ಸಿ. ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ ‘ಬ್ಯಾಂಕೋ ಬ್ಲೂ ರಿಬ್ಬನ್’ ಪ್ರಶಸ್ತಿ

ಉಡುಪಿ: ಎಲ್.ಐ.ಸಿ. ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ ‘ಬ್ಯಾಂಕೋ ಬ್ಲೂ ರಿಬ್ಬನ್ 2023 ’ ಪ್ರಶಸ್ತಿಯನ್ನು ಶುಕ್ರವಾರದಂದು ಪ್ರದಾನ ಮಾಡಲಾಯಿತು. ದಾಮನ್‌ನಲ್ಲಿ ಆಯೋಜಿಸಲಾದ ವಾರ್ಷಿಕ ಶೃಂಗಸಭೆಯಲ್ಲಿ ಎಲ್.ಐ.ಸಿ ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಕೆ. ಕೃಷ್ಣ ಇವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯ ಮಹಾ ಪ್ರಬಂಧಕ ಪಿ.ಕೆ ಅರೋರಾ ಇವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಿಕೋ ಬ್ಯಾಂಕಿನ ನಿರ್ದೇಶಕ ಕೆ. ಶಿವಪ್ರಸಾದ್, […]

ಹಿಂಡನ್ ಬರ್ಗ್ ವರದಿಯ ಸಮಗ್ರ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ಉಡುಪಿ: ಸೋಮವಾರದಂದು ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅದಾನಿ ವ್ಯವಹಾರದ ವಿರುದ್ಧ ಹಿಂಡನ್ ಬರ್ಗ್ ವರದಿಯ ಸಮಗ್ರ ತನಿಖೆಗೆ ಆಗ್ರಹಿಸಿ ಇಂದು ಉಡುಪಿ ಅಜ್ಜರಕಾಡುವಿನಲ್ಲಿರುವ ಎಲ್.ಐ.ಸಿ ಕಚೇರಿ ಎದುರು ಧರಣಿ ನಡೆಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್ , ನಮ್ಮ ಹೋರಾಟ ಎಲ್‌ಐಸಿ ವಿರುದ್ಧ ಅಲ್ಲ. ಎಲ್.ಐ.ಸಿ ಗೆ ಆಗಿರುವ ಅನ್ಯಾಯಕ್ಕಾಗಿ ಸರಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಕೆಲವು ಮಂದಿ ಸೇರಿ ದೇಶದ ಬ್ಯಾಂಕ್ ಗಳನ್ನು ಲೂಟಿ ಮಾಡುತ್ತಿದ್ದಾರೆ. ದೇಶದ 12 ಕೋಟಿ […]

ಮಂಗಳೂರು: ಎಲ್.ಐ.ಸಿ ಮಂಗಳೂರು ಶಾಖೆಯ ಅಭಿವೃದ್ಧಿಅಧಿಕಾರಿ ಜಗದೀಶ್.ವಿ.ಗೋಳಿ ಬೀಳ್ಕೊಡುಗೆ ಕಾರ್ಯಕ್ರಮ

ಮಂಗಳೂರು: ಎಲ್.ಐ.ಸಿ ವತಿಯಿಂದ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಐ.ಸಿ ಮಂಗಳೂರು ಪ್ರಥಮ ಶಾಖೆಯ ಅಭಿವೃದ್ಧಿ ಅಧಿಕಾರಿ ಜಗದೀಶ್ ವಿ ಗೋಳಿ ಅವರನ್ನು ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಶಾಖೆಯ ಹಿರಿಯ ಪ್ರಬಂಧಕ ತುಳಸೀದಾಸ್ ವಿ.ಪವಸ್ಕರ್‌ ಮಾತನಾಡಿ, ಜೀವವಿಮಾ ನಿಗಮದ ಬೆಳವಣಿಗೆಯಲ್ಲಿ ಜಗದೀಶ್‌ ಅವರ ಕೊಡಗೆ ಅಪಾರ ಎಂದು ಸ್ಮರಿಸಿದರು. ಈ ಸಂದರ್ಭದಲ್ಲಿ ಜಗದೀಶ್.ವಿ.ಗೋಳಿ ದಂಪತಿ ಮತ್ತು ಮಕ್ಕಳನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡುವ ಮೂಲಕ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್.ವಿ.ಗೋಳಿ, “ಸಂಸ್ಥೆಯಿಂದ ನಾನು ಬಹಳಷ್ಟು ಅನುಭವಗಳನ್ನು ಪಡೆದುಕೊಂಡಿದ್ದೇನೆ. […]