ಕೋವಿಡ್ -19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದ ಅಂಗಡಿ, ಹೋಟೆಲ್ ಗಳ ಪರವಾನಿಗೆ ರದ್ದುಪಡಿಸಲಾಗುವುದು: ಡಿಸಿ ಎಚ್ಚರಿಕೆ
ಉಡುಪಿ: ಇತ್ತೀಚಿನ ದಿನಗಳಲ್ಲಿ ಅಂಗಡಿ-ಮುಂಗಟ್ಟು, ಹೋಟೆಲ್‍ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು, ಮಾಲೀಕರು ಮತ್ತು ಸಿಬ್ಬಂದಿ ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸದೇ ಇರುವುದು ಕಂಡುಬಂದಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ತಾತ್ಕಾಲಿಕವಾಗಿ ಅಂಗಡಿ ಪರವಾನಗಿಯನ್ನು ರದ್ದುಪಡಿಸಿ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಜಿಪಂ ಕಚೇರಿಯಲ್ಲಿ ನಡೆದ ಕೋವಿಡ್ 19 ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ತಪ್ಪದೇ ಮಾಸ್ಕ್ ಗಳನ್ನು ಧರಿಸುವಂತೆ ಬಸ್ಸಿನ ನಿರ್ವಾಹಕರು ಎಚ್ಚರವಹಿಸಬೇಕು. ಹಾಗೆ […]