ಸಂತ ಸೇವಾಲಾಲರ ಜೀವನಶೈಲಿ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳಿ
ಉಡುಪಿ: ಸಂತ ಸೇವಾಲಾಲ್ ಅವರ ಜೀವನಶೈಲಿ ಮತ್ತು ಆದರ್ಶಗಳನ್ನು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಜನರಿಗೆ ಉತ್ತಮ ಸೇವೆ ನೀಡುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮದನ್ ಮೋಹನ್ ಹೇಳಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ಸಣ್ಣ ಸಮುದಾಯಗಳ […]