ಮೇ 17 ರಿಂದ 21ವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಉಡುಪಿ: ಕರ್ನಾಟಕ ಕರಾವಳಿಯ ವಿವಿಧ ಭಾಗಗಳಲ್ಲಿ ಮೇ 17 ರಿಂದ 21ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉದ್ದಕ್ಕೂ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮೇ 19 ರಂದು 205 ಮಿಮೀ, ಮೇ 18 ಮತ್ತು 20 ರಂದು 115 ಮಿಮೀ ಹಾಗೂ ಮೇ 17 ಮತ್ತು […]
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಿಂಚಿನ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಏಪ್ರಿಲ್ 23 ಮತ್ತು 24 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಕಟನೆಯು ಎಚ್ಚರಿಸಿರುತ್ತದೆ. ಉಳಿದಂತೆ ಏಪ್ರಿಲ್ 25, 26, 27 ರಂದು ಹವಾಮಾನದಲ್ಲಿ ಯಾವುದೇ ರೀತಿಯ ಬದಲಾವಣೆಯು ಇರುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.