275 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭ: ಸಚಿವ ಸಂಪುಟದಲ್ಲಿ ನಿರ್ಧಾರ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಮೊದಲ ಹಂತದಲ್ಲಿ 275 ಪಬ್ಲಿಕ್ ಶಾಲೆಗಳಲ್ಲಿ ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಶಿಕ್ಷಣ ನೀಡಲು […]