ಲಾಕ್‌ಡೌನ್‌ ನಿರ್ಬಂಧ ಇನ್ನಷ್ಟು ಸಡಿಲ; ಮಾಲ್‌, ದೇವಸ್ಥಾನಗಳಿಗೆ ಅನುಮತಿ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್‌ ಲಾಕ್‌ಡೌನ್‌ ನಿಯಮಗಳನ್ನು ಇನ್ನಷ್ಟು ಸಡಿಲಿಕೆ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮಾಲ್‌, ದೇವಸ್ಥಾನಗಳನ್ನು ತೆರೆಯುವುದಕ್ಕೆ ಅವಕಾಶ ನೀಡುವ ಸಾಧ್ಯತೆ ಇದ್ದು, ಸಿನಿಮಾ ಮಂದಿರ ತೆರೆಯಲು ಅವಕಾಶ ನೀಡುವ ಸಾಧ್ಯತೆ ಇಲ್ಲ ಎಂದು ಎನ್ನಲಾಗಿದೆ. ಶಾಲಾ–ಕಾಲೇಜು ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ಸಂಬಂಧ […]