ಲಾಕ್‌ಡೌನ್ ನಿರ್ಧಾರ ಸಿಎಂಗೆ ಬಿಟ್ಟ ವಿಚಾರ: ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಬೇಕೆ , ಬೇಡವೇ ಎನ್ನುವುದರ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕೋವಿಡ್ 19 ನಿಗ್ರಹ ಕಾರ್ಯಪಡೆ ಸಭೆಯ ಬಳಿಕ ಮಾತನಾಡಿದ ಅವರು, ‘ಸಭೆಯಲ್ಲಿ ಲಾಕ್‌ಡೌನ್ ವಿಷಯ ಕುರಿತಂತೆ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಲಾಕ್‌ಡೌನ್ ಅಗತ್ಯವಿಲ್ಲವೆಂದು ನಾನು ಮತ್ತು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮುಖ್ಯಮಂತ್ರಿಗೆ ಮನದಟ್ಟು ಮಾಡಿದ್ದೇವೆ […]