ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆ
ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10ರಷ್ಟು ಇದೆ. ಮೈಸೂರಿನಲ್ಲಿ ಶೇ. 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಶೇ 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, […]