11 ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದೆಡೆ ಲಾಕ್‌ಡೌನ್ ಸಡಿಲಿಕೆ

ಬೆಂಗಳೂರು: ಪಾಸಿಟಿವಿಟಿ ರೇಟ್ ಹೆಚ್ಚಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಿರುವ ಲಾಕ್ ಡೌನ್ ಮುಂದುವರಿಯಲಿದೆ ಎಂದು ಹೇಳಿದರು. ಯಾವುದಕ್ಕೆ ಅವಕಾಶ: ಎಲ್ಲ ಕಾರ್ಖಾನೆಗಳಲ್ಲಿ ಶೇ. 50, ಗಾರ್ಮೆಂಟ್‌ನಲ್ಲಿ ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. […]