ಲಾಕ್ ಡೌನ್ ಅನಿವಾರ್ಯ ಆಗಬಹುದು: ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹೀಗಾಗಿ ಇನ್ನು ಬಿಗಿ ಕ್ರಮ ಅನಿವಾರ್ಯವಾಗಿದ್ದು, ಲಾಕ್ ಡೌನ್ ಅನಿವಾರ್ಯ ಆಗಬಹುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರು ಅಣ್ಣಮ್ಮ ದೇವಾಲಯಕ್ಕೆ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕೊರೊನಾ ದೂರ ಆಗಬೇಕು ಎಂದು ದೇವರ ದರ್ಶನ ಪಡೆದು ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ದಿನೇ ದಿನೇ ಕೇಸ್ ಜಾಸ್ತಿ ಆಗುತ್ತಿದೆ. […]