ಜಾಗತಿಕವಾಗಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ: ರೂಪಾಂತರಗಳ ಮೇಲೆ ನಿಗಾ ಇಡಲು ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಚೀನಾ ಮತ್ತು ಅಮೇರಿಕಾದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಹೊಸ ಏರಿಕೆಯ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಂತಾರಾಷ್ಟ್ರೀಯ ಸನ್ನಿವೇಶವನ್ನು ಪರಿಗಣಿಸಿ ಸಚಿವರು ಬುಧವಾರದಂದು ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎನ್ನಲಾಗಿದೆ. ಮಂಗಳವಾರದಂದು, ಆರೋಗ್ಯ ಸಚಿವಾಲಯವು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡಲು ಸಕಾರಾತ್ಮಕ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಪತ್ತೆ ಹಚ್ಚಲು ಎಲ್ಲಾ ರಾಜ್ಯಗಳಿಗೆ […]