ಭ್ರಷ್ಟಚಾರ ಆರೋಪಿಸಿ ಉಪಲೋಕಾಯುಕ್ತರಿಗೆ ದೂರು: ಉಡುಪಿ ನೋಂದಣಿ ಕಛೇರಿಯಲ್ಲಿ ಲೋಕಾಯುಕ್ತ ಪೋಲಿಸರಿಂದ ತನಿಖೆ
ಉಡುಪಿ: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿವಿಧ ಕಚೇರಿಗಳಿಗೆ ಅನೀರಿಕ್ಷಿತ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ವಕೀಲರರೊಬ್ಬರು ಸಾರ್ವಜನಿಕರು ಉಡುಪಿ ನೋಂದಣಿ ಕಚೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರಿದ ಹಿನ್ನಲೆ ಉಪ ಲೋಕಾಯುಕ್ತ, ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಇವರು ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ […]
ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ ಅಧಿಕಾರಿಗಳ ಮೇಲೆ ‘ಲೋಕಾ’ ಪ್ರಹಾರ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬುಧವಾರ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ, ಇನ್‌ಸ್ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ […]
ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಹೃದಯಾಘಾತದಿಂದ ನಿಧನ
ವಿಜಯಪುರ: ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಅರುಣ್ ನಾಯಕ್ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ಬಜಪೆ: 5 ಲಕ್ಷ ರೂ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಶಾಲಾ ಸಂಚಾಲಕಿ
ಬಜಪೆ: ವಿದ್ಯೆ ಕಲಿಸಿ ವಿದ್ಯಾರ್ಥಿಗಳನ್ನು ಸರಿಯಾದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡಬೇಕಾಗಿರುವ ವಿದ್ಯಾ ದೇಗುಲಗಳೇ ಭ್ರಷ್ಟಾಚಾರಕ್ಕೆ ಎಡೆ ಮಾಡಿದಾಗ ಸಮಾಜಕ್ಕೆ ದಾರಿ ತೋರುವವರು ಯಾರು ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯಕ್ತ ಬಲೆಗೆ ಸಿಲುಕಿ ಬಿದ್ದಿದ್ದಾರೆ. ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಶುಕ್ರವಾರದಂದು 5 ಲಕ್ಷ […]
ಬೈಂದೂರು: ಏಪ್ರಿಲ್ 12 ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ
ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಏಪ್ರಿಲ್ 12 ರಂದು ಬೈಂದೂರು ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ […]