ಚನ್ನಗಿರಿ ಬಿಜೆಪಿ ಶಾಸಕನ ಪುತ್ರನ ಬಳಿ 7 ಕೋಟಿ 62 ಲಕ್ಷ ರೂ.ಪತ್ತೆ ಮಾಡಿದ ಲೋಕಾಯುಕ್ತ; 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್ಡಿಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್ ಒಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್ ಕೇಳಿದ್ದು ಈ ಸಂಬಂಧ ಮುಂಗಡವಾಗಿ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪ್ರಶಾಂತ್ ನನ್ನು ಬಂಧಿಸಿದ್ದರು. ಬಳಿಕ ಪ್ರಶಾಂತ್ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಆತನ ಮನೆ ಹಾಗೂ ಕಚೇರಿಗಳಿಂದ 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಲಂಚ ಸ್ವೀರಿಸುತ್ತಿದ್ದ […]
ಕರ್ನಾಟಕ ಉಪಲೋಕಾಯುಕ್ತ ಜಸ್ಟೀಸ್ ಕೆ.ಎನ್.ಫಣೀಂದ್ರ ಶ್ರೀಕೃಷ್ಣ ಮಠ ಭೇಟಿ
ಉಡುಪಿ: ಕರ್ನಾಟಕ ಉಪಲೋಕಾಯುಕ್ತರಾದ ಜಸ್ಟೀಸ್ ಕೆ.ಎನ್.ಫಣೀಂದ್ರ ಇವರು ಶನಿವಾರದಂದು ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಉಪಸ್ಥಿತರಿದ್ದರು.
ಲೋಕಾಯುಕ್ತ ಕಾಯ್ದೆ: ಅಕ್ಟೋಬರ್ 17 ರಿಂದ ದೂರು ಸ್ವೀಕಾರ
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಅಕ್ಟೋಬರ್ 17 ರಂದು ಬೈಂದೂರು ಪ್ರವಾಸಿ ಮಂದಿರ, ಅ.18 ರಂದು ಕುಂದಾಪುರ ಪ್ರವಾಸಿ ಮಂದಿರ, ಅ.19 ರಂದು ಹೆಬ್ರಿ ಪ್ರವಾಸಿ ಮಂದಿರ, ಅ.20 ರಂದು ಕಾರ್ಕಳ ಪ್ರವಾಸಿ ಮಂದಿರ, ಅ.21 ರಂದು ಬ್ರಹ್ಮಾವರ ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣ ಹಾಗೂ ಅ.25 […]
ಅವಿಭಜಿತ ದ.ಕನ್ನಡದಲ್ಲಿ ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಲೋಕಾಯುಕ್ತ ಠಾಣೆಗೆ ದೂರು ನೀಡಿ: ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್
ಮಂಗಳೂರು: ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಜನತೆಗೆ ಭ್ರಷ್ಟಾಚಾರದ ವಿರುದ್ದ ಯಾವುದೇ ರೀತಿಯ ದೂರು ಅಥವಾ ಅಕ್ರಮ ಆಸ್ತಿಗಳ ಬಗ್ಗೆ ದೂರು ದಾಖಲಿಸಲಿದ್ದಲ್ಲಿ, ಮಂಗಳೂರಿನ ಊರ್ವಾ ಸ್ಟೋರಿನಲ್ಲಿರುವ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಂಗಳೂರು-ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ಹೇಳಿದ್ದಾರೆ. ಸೋಮವಾರದಂದು ಊರ್ವಾಸ್ಟೋರ್ ನ ಲೋಕಾಯುಕ್ತ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಲೋಕಾಯುಕ್ತದ ವಾಪ್ತಿಯು ಅವಿಭಜಿತ ದ.ಕ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳೆರಡಲ್ಲೂ ಇದ್ದು, ಈ ಹಿಂದೆ ಕರ್ನಾಟಕ […]
ಸೆ.21 ರಿಂದ 28 ರವರೆಗೆ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಸೆಪ್ಟಂಬರ್ 21 ರಂದು ಬೈಂದೂರು ಪ್ರವಾಸಿ ಮಂದಿರ, ಸೆ. 22 ರಂದು ಕುಂದಾಪುರ ಪ್ರವಾಸಿ ಮಂದಿರ, ಸೆ. 23 ರಂದು ಹೆಬ್ರಿ ಪ್ರವಾಸಿ ಮಂದಿರ, ಸೆ. 26 ರಂದು ಕಾರ್ಕಳ ಪ್ರವಾಸಿ ಮಂದಿರ, ಸೆ. 27 ರಂದು ಬ್ರಹ್ಮಾವರ ತಾಲೂಕು ಕಚೇರಿ […]