ಜೂನ್ 20 ರಿಂದ 24: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಜೂನ್ 20 ರಂದು ಬೈಂದೂರು ಪ್ರವಾಸಿ ಮಂದಿರ, ಜೂನ್ 21 ರಂದು ಕುಂದಾಪುರ ಪ್ರವಾಸಿ ಮಂದಿರ, ಜೂನ್ 22 ರಂದು ಕಾರ್ಕಳ ಪ್ರವಾಸಿ ಮಂದಿರ, ಜೂನ್ 23 ರಂದು ಹೆಬ್ರಿ ಪ್ರವಾಸಿ ಮಂದಿರ, ಜೂನ್ 24 ರಂದು ಕಾಪು ಪುರಸಭೆ ಕಚೇರಿ […]

ಸರ್ಕಾರ ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಿದೆ: ಸಿಎಂ ಬೊಮ್ಮಾಯಿ

ಮೈಸೂರು: ರಾಜ್ಯ ಸರ್ಕಾರವು ಶೀಘ್ರವೇ ಲೋಕಾಯುಕ್ತರನ್ನು ನೇಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲೋಕಾಯುಕ್ತರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂರು ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಆಫರ್‌ಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.