ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಪ್ರಶ್ನೆಗಳ ಸುರಿಮಳೆ; 2 ಗಂಟೆಗಳ ಕಾಲ ವಿಚಾರಣೆ – ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಬುಧವಾರ (ನ6)ವಿಚಾರಣೆಗೆ ಹಾಜರಾಗಿ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಾಯುಕ್ತ ವಿಚಾರಣೆ ಬಳಿಕ, ಪ್ರಶ್ನೆಗಳ ಸುರಿಮಳೆಗೈದ ಮಾಧ್ಯಮ ಪ್ರತಿನಿಧಿಗಳಿಗೆ ಸಿಡಿಮಿಡಿಯಿಂದಲೇ ಉತ್ತರ ನೀಡಿದರು. ಹಲವು ಪ್ರಶ್ನೆಗಳನ್ನು ಮುಂದಿಟ್ಟಾಗ ಸಿಎಂ ರೇಗಾಡಿದರು.‘ಎಲ್ಲವನ್ನೂ ಅವರು ರೆಕಾರ್ಡ್ ಮಾಡಿದ್ದಾರೆ. ಸುಳ್ಳು ಕೇಸ್ ಹಾಕಿದ್ದಾರೆ ವಿಚಾರಣೆ ಮಾಡಿದ್ದಾರೆ. ಇದರಲ್ಲಿ ನನಗೇಕೆ ಮುಜುಗರ. ನನ್ನನ್ನು ಮತ್ತೆ ವಿಚಾರಣೆಗೆ […]