ಮೂರನೇ ಹಂತದ ಮತದಾನ: ಗಾಂಧಿನಗರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆಯ 3 ನೇ ಹಂತದ ಮತದಾನ ಮಂಗಳವಾರ ಆರಂಭವಾಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಅಹಮದಾಬಾದ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಇಂದು ಮೂರನೇ ಹಂತದ ಮತದಾನ. ನಮ್ಮ ದೇಶದಲ್ಲಿ ‘ದಾನ’ಕ್ಕೆ ಹೆಚ್ಚಿನ ಮಹತ್ವವಿದ್ದು, ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ಇನ್ನೂ 4 ಸುತ್ತಿನ ಮತದಾನ ಬಾಕಿ ಇದೆ” ಎಂದರು. ಗುಜರಾತಿನ ಮತದಾರನಾಗಿ ನಾನು ನಿಯಮಿತವಾಗಿ ಮತ ಚಲಾಯಿಸುವ ಏಕೈಕ […]

ಬೈಂದೂರು ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ವ್ಯವಸ್ಥೆ

ಬೈಂದೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 15- ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಪಿ.ಆರ್.ಓ, ಎ.ಪಿ.ಆರ್.ಓ ಹಾಗೂ ಪಿ.ಓ ಆಗಿ ಕೆಲಸ ನಿರ್ವಹಿಸಲು ನೇಮಕಗೊಂಡ ಬೇರೆ ವಿಧಾನಸಭಾ ಕ್ಷೇತ್ರದ ಅಧಿಕಾರಿ ಹಾಗೂ ಸಿಬ್ಬಂದಿಗಳು ಮೇ 6 ರಂದು ಚುನಾವಣಾ ಕರ್ತವ್ಯ ನಿಮಿತ್ತ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಅನುಕೂಲವಾಗುವಂತೆ ಉಚಿತ ಬಸ್ಸುಗಳ ವ್ಯವಸ್ಥೆಯನ್ನು ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡಲಾಗಿದ್ದು, ಬೈಂದೂರಿಗೆ ತೆರಳಲು ಈ […]

ದೇಶಾದ್ಯಂತ ಎರಡನೇ ಹಂತದ ಮತದಾನ: ಕರ್ನಾಟಕದಲ್ಲಿ 69 ಪ್ರತಿಶತದಷ್ಟು ಮತದಾನ; ಶೇ.81.48 ಮತದಾನದೊಂದಿಗೆ ಮಂಡ್ಯ ಜಿಲ್ಲೆಗೆ ಮೊದಲನೆ ಸ್ಥಾನ

ಬೆಂಗಳೂರು: ಏಪ್ರಿಲ್ 26 ರಂದು 2024 ರ ಲೋಕಸಭಾ ಚುನಾವಣೆಯ (Loksabha Elections) ಎರಡನೇ ಹಂತದಲ್ಲಿ ನಡೆದ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮತದಾನವು ಮುಕ್ತಾಯಗೊಂಡಿದೆ, ರಾಜ್ಯದಲ್ಲಿ 69 ಪ್ರತಿಶತದಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ತಾತ್ಕಾಲಿಕ ವರದಿ ತಿಳಿಸಿದೆ. ಸುಡು ಬಿಸಿಲನ್ನೂ ಲೆಕ್ಕಿಸದೆ ಮತದಾರರು ಅತ್ಯುತ್ಸಾಹದಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ತಮ್ಮ ಜವಾಬ್ದಾರಿ ಪೂರೈಸಿದ್ದಾರೆ. ಮತದಾನ ನಡೆದ 14 ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಅತಿ ಹೆಚ್ಚು ಶೇ.81.48ರಷ್ಟು ಮತದಾನವಾಗಿದ್ದು, ಕೋಲಾರದಲ್ಲಿ ಶೇ.78.07 ಹಾಗೂ ಬೆಂಗಳೂರು […]

ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಮತ ಚಲಾವಣೆ

ತಿರುವನಂತಪುರಂ: ದೇಶದ ಹೆಮ್ಮೆಯ ಸಂಸ್ಥೆ, ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರು ಕೇರಳದ ತಿರುವನಂತಪುರಂನಲ್ಲಿರುವ ಮತಗಟ್ಟೆಯಲ್ಲಿ ಇತರ ಮತದಾರರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಏಪ್ರಿಲ್ 26 ರಂದುಚುನಾವಣೆ ನಡೆಯಲಿದ್ದು, ಸ್ಥಳೀಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ಸ್ಗಳು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಏಪ್ರಿಲ್ 24 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಹಾಗೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]