ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ನಮನ
ಲಂಡನ್: ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಲಂಡನ್ಗೆ ಭೇಟಿ ನೀಡಿದ್ದು, ಭಾನುವಾರ ಲ್ಯಾಂಬೆತ್ ನಗರದ ಥೇಮ್ಸ್ ನದಿ ದಂಡೆ ಮೇಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಲ್ಯಾಂಬೆತ್ ನಗರದಲ್ಲಿನ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಗೌರವ ಸಲ್ಲಿಸಿದರು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರು ಖಾದರ್ ಹಾಗೂ ಹೊರಟ್ಟಿ ಅವರನ್ನು […]